Proverbs · chapter 17 · verse 13
Proverbs 17:13 in Kannada
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
Upakaarakke apakaaravannu maaduvavana mane yinda kedu tolaguvade illa.
Proverbs 17:13 in English
- King James Version (KJV)
- Whoso rewardeth evil for good, evil shall not depart from his house.
- World English Bible (WEB)
- Whoever rewards evil for good, evil shall not depart from his house.
- American Standard Version (ASV)
- Whoso rewardeth evil for good, Evil shall not depart from his house.
- Bible in Basic English (BBE)
- If anyone gives back evil for good, evil will never go away from his house.
- Darby Translation (DBY)
- Whoso rewardeth evil for good, evil shall not depart from his house.
- Webster's Bible (WBS)
- Whoever rewardeth evil for good, evil shall not depart from his house.
- Young's Literal Translation (YLT)
- Whoso is returning evil for good, Evil moveth not from his house.
Read in context
- 11ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
- 12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
- 13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- 14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- 15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
Cross references
- Psalm 109:4–13 ಕೀರ್ತನೆಗಳು 109:4–13ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ. ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Psalm 55:12–15 ಕೀರ್ತನೆಗಳು 55:12–15ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು. ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
- Psalm 38:20 ಕೀರ್ತನೆಗಳು 38:20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- Psalm 35:12 ಕೀರ್ತನೆಗಳು 35:12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- 2 Samuel 12:10 2 ಸಮುವೇಲನು 12:10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- Jeremiah 18:20–21 ಯೆರೆಮೀಯ 18:20–21ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Matthew 27:5 ಮತ್ತಾಯನು 27:5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- 1 Samuel 24:17 1 ಸಮುವೇಲನು 24:17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.