Proverbs · chapter 17 · verse 14
Proverbs 17:14 in Kannada
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
Obbanu neerannu horabiduvante kalahada praarambhavu iruvadu. Aadakaarana aa kalahakke kai haakuvadakkinta munche adannu bittubidu.
Proverbs 17:14 in English
- King James Version (KJV)
- The beginning of strife [is as] when one letteth out water: therefore leave off contention, before it be meddled with.
- World English Bible (WEB)
- The beginning of strife is like breaching a dam, therefore stop contention before quarreling breaks out.
- American Standard Version (ASV)
- The beginning of strife is [as] when one letteth out water: Therefore leave off contention, before there is quarrelling.
- Bible in Basic English (BBE)
- The start of fighting is like the letting out of water: so give up before it comes to blows.
- Darby Translation (DBY)
- The beginning of contention is [as] when one letteth out water; therefore leave off strife before it become vehement.
- Webster's Bible (WBS)
- The beginning of strife [is as] when one letteth out water: therefore withdraw from contention, before it be meddled with.
- Young's Literal Translation (YLT)
- The beginning of contention [is] a letting out of waters, And before it is meddled with leave the strife.
Read in context
- 12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
- 13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- 14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- 15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- 16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
Cross references
- Proverbs 20:3 ಜ್ಞಾನೋಕ್ತಿಗಳು 20:3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- 2 Timothy 2:23–24 2 ತಿಮೊಥೆಯನಿಗೆ 2:23–24ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- Ecclesiastes 7:8–9 ಪ್ರಸಂಗಿ 7:8–9ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ. ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- 1 Thessalonians 4:11 1 ಥೆಸಲೊನೀಕದವರಿಗೆ 4:11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- Proverbs 19:11 ಜ್ಞಾನೋಕ್ತಿಗಳು 19:11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- 2 Chronicles 13:17 2 ಪೂರ್ವಕಾಲವೃತ್ತಾಂತ 13:17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- Proverbs 26:21 ಜ್ಞಾನೋಕ್ತಿಗಳು 26:21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
- Matthew 5:39–41 ಮತ್ತಾಯನು 5:39–41ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು. ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು. ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
- 2 Chronicles 10:14–16 2 ಪೂರ್ವಕಾಲವೃತ್ತಾಂತ 10:14–16ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು. ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.