Proverbs · chapter 17 · verse 21
Proverbs 17:21 in Kannada
ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
Buddhiheenanannu hettavanige vyathe; buddhiheenana tandege santoshaviruvadilla.
Proverbs 17:21 in English
- King James Version (KJV)
- He that begetteth a fool [doeth it] to his sorrow: and the father of a fool hath no joy.
- World English Bible (WEB)
- He who becomes the father of a fool grieves. The father of a fool has no joy.
- American Standard Version (ASV)
- He that begetteth a fool [doeth it] to his sorrow; And the father of a fool hath no joy.
- Bible in Basic English (BBE)
- He who has an unwise son gets sorrow for himself, and the father of a foolish son has no joy.
- Darby Translation (DBY)
- He that begetteth a fool [doeth it] to his sorrow, and the father of a vile [man] hath no joy.
- Webster's Bible (WBS)
- He that begetteth a fool [doeth it] to his sorrow: and the father of a fool hath no joy.
- Young's Literal Translation (YLT)
- Whoso is begetting a fool hath affliction for it, Yea, the father of a fool rejoiceth not.
Read in context
- 19ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
- 20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
- 21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
- 22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- 23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
Cross references
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Proverbs 19:13 ಜ್ಞಾನೋಕ್ತಿಗಳು 19:13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- 1 Samuel 2:32–35 1 ಸಮುವೇಲನು 2:32–35ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ. ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು. ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Genesis 26:34 ಆದಿಕಾಂಡ 26:34ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Proverbs 23:15–16 ಜ್ಞಾನೋಕ್ತಿಗಳು 23:15–16ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು. ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- 3 John 1:4 3 ಯೋಹಾನನು 1:4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- Philemon 1:19–20 ಫಿಲೆಮೋನನಿಗೆ 1:19–20ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ? ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
- 2 Corinthians 2:3 2 ಕೊರಿಂಥದವರಿಗೆ 2:3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.