Proverbs · chapter 17 · verse 4
Proverbs 17:4 in Kannada
ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
Kedu maaduva vanu ketta tutigalige kivigoduttaane; sullugaaranu neechavaada naaligege kivigoduvanu;
Proverbs 17:4 in English
- King James Version (KJV)
- A wicked doer giveth heed to false lips; [and] a liar giveth ear to a naughty tongue.
- World English Bible (WEB)
- An evildoer heeds wicked lips. A liar gives ear to a mischievous tongue.
- American Standard Version (ASV)
- An evil-doer giveth heed to wicked lips; [And] a liar giveth ear to a mischievous tongue.
- Bible in Basic English (BBE)
- A wrongdoer gives attention to evil lips, and a man of deceit gives ear to a damaging tongue.
- Darby Translation (DBY)
- The evil-doer giveth heed to iniquitous lips; the liar giveth ear to a mischievous tongue.
- Webster's Bible (WBS)
- A wicked doer giveth heed to false lips: [and] a liar giveth ear to a naughty tongue.
- Young's Literal Translation (YLT)
- An evil doer is attentive to lips of vanity, Falsehood is giving ear to a mischievous tongue.
Read in context
- 2ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
- 3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- 4ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
- 5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- 6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
Cross references
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- Proverbs 28:4 ಜ್ಞಾನೋಕ್ತಿಗಳು 28:4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
- 1 John 4:5 1 ಯೋಹಾನನು 4:5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- 1 Kings 22:6–28 1 ಅರಸುಗಳು 22:6–28ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು. ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- Revelation 13:3–8 ಪ್ರಕಟನೆ 13:3–8ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು. ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.