Proverbs · chapter 17 · verse 8
Proverbs 17:8 in Kannada
ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
Takkolluvavana kannugalige lanchavu beleyulla kallinantide; adannu hege tirugisidaroo abhivruddhiyaaguttade.
Proverbs 17:8 in English
- King James Version (KJV)
- A gift [is as] a precious stone in the eyes of him that hath it: whithersoever it turneth, it prospereth.
- World English Bible (WEB)
- A bribe is a precious stone in the eyes of him who gives it; wherever he turns, he prospers.
- American Standard Version (ASV)
- A bribe is [as] a precious stone in the eyes of him that hath it; Whithersoever it turneth, it prospereth.
- Bible in Basic English (BBE)
- An offering of money is like a stone of great price in the eyes of him who has it: wherever he goes, he does well.
- Darby Translation (DBY)
- A gift is a precious stone in the eyes of the possessor: whithersoever it turneth it prospereth.
- Webster's Bible (WBS)
- A gift [is as] a precious stone in the eyes of him that hath it: whithersoever it turneth, it prospereth.
- Young's Literal Translation (YLT)
- A stone of grace [is] the bribe in the eyes of its possessors, Whithersoever it turneth, it prospereth.
Read in context
- 6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- 7ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
- 8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
- 9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
- 10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
Cross references
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Proverbs 21:14 ಜ್ಞಾನೋಕ್ತಿಗಳು 21:14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
- Amos 5:12 ಆಮೋಸ 5:12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- 1 Samuel 25:35 1 ಸಮುವೇಲನು 25:35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Proverbs 17:23 ಜ್ಞಾನೋಕ್ತಿಗಳು 17:23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- 2 Samuel 16:1–4 2 ಸಮುವೇಲನು 16:1–4ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು. ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು. ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು. ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Genesis 33:9–11 ಆದಿಕಾಂಡ 33:9–11ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು. ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- Psalm 21:13 ಕೀರ್ತನೆಗಳು 21:13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.