Proverbs · chapter 18 · verse 12
Proverbs 18:12 in Kannada
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
Naashanakke munde manushyana hrudayavu garvavaagide; sanmaanakke munche vinayavaagide.
Proverbs 18:12 in English
- King James Version (KJV)
- Before destruction the heart of man is haughty, and before honour [is] humility.
- World English Bible (WEB)
- Before destruction the heart of man is proud, but before honor is humility.
- American Standard Version (ASV)
- Before destruction the heart of man is haughty; And before honor [goeth] humility.
- Bible in Basic English (BBE)
- Before destruction the heart of man is full of pride, and before honour goes a gentle spirit.
- Darby Translation (DBY)
- Before destruction the heart of man is haughty; and before honour [goeth] humility.
- Webster's Bible (WBS)
- Before destruction the heart of man is haughty, and before honor [is] humility.
- Young's Literal Translation (YLT)
- Before destruction the heart of man is high, And before honour [is] humility.
Read in context
- 10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- 11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
- 12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- 13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- 14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
Cross references
- Proverbs 15:33 ಜ್ಞಾನೋಕ್ತಿಗಳು 15:33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Proverbs 11:2 ಜ್ಞಾನೋಕ್ತಿಗಳು 11:2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Ezekiel 28:9 ಯೆಹೆಜ್ಕೇಲನು 28:9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- Acts 12:21–23 ಅಪೊಸ್ತಲರ ಕೃತ್ಯಗಳು 12:21–23ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು. ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Daniel 9:23 ದಾನಿಯೇಲನು 9:23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Daniel 9:20 ದಾನಿಯೇಲನು 9:20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
- Ezekiel 16:49–50 ಯೆಹೆಜ್ಕೇಲನು 16:49–50ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.