Proverbs · chapter 18 · verse 14
Proverbs 18:14 in Kannada
ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
Tanna balaheenateyannu manushyana aatmavu sahisuvadu; gaayapatta aatmavannu sahisuvavaru yaaru?
Proverbs 18:14 in English
- King James Version (KJV)
- The spirit of a man will sustain his infirmity; but a wounded spirit who can bear?
- World English Bible (WEB)
- A man’s spirit will sustain him in sickness, but a crushed spirit, who can bear?
- American Standard Version (ASV)
- The spirit of a man will sustain his infirmity; But a broken spirit who can bear?
- Bible in Basic English (BBE)
- The spirit of a man will be his support when he is ill; but how may a broken spirit be lifted up?
- Darby Translation (DBY)
- The spirit of a man sustaineth his infirmity; but a broken spirit who can bear?
- Webster's Bible (WBS)
- The spirit of a man will sustain his infirmity; but a wounded spirit who can bear?
- Young's Literal Translation (YLT)
- The spirit of a man sustaineth his sickness, And a smitten spirit who doth bear?
Read in context
- 12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- 13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- 14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- 15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- 16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
Cross references
- Proverbs 15:13 ಜ್ಞಾನೋಕ್ತಿಗಳು 15:13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 1 Peter 1:6 1 ಪೇತ್ರನು 1:6ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- 2 Corinthians 2:7 2 ಕೊರಿಂಥದವರಿಗೆ 2:7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- Psalm 77:2–3 ಕೀರ್ತನೆಗಳು 77:2–3ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Job 7:14–15 ಯೋಬನು 7:14–15ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ. ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- Job 2:7–10 ಯೋಬನು 2:7–10ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು. ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು. ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Psalm 88:14–16 ಕೀರ್ತನೆಗಳು 88:14–16ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- Psalm 42:10–11 ಕೀರ್ತನೆಗಳು 42:10–11ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು. ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.