Proverbs · chapter 18 · verse 19
Proverbs 18:19 in Kannada
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
Balavaada pattanakkinta anyaaya hondida sahodaranannu sampaadisuvadu kashta kara. Avara kalahagalu aramaneya salaakigalante ive.
Proverbs 18:19 in English
- King James Version (KJV)
- A brother offended [is harder to be won] than a strong city: and [their] contentions [are] like the bars of a castle.
- World English Bible (WEB)
- A brother offended is more difficult than a fortified city. Disputes are like the bars of a fortress.
- American Standard Version (ASV)
- A brother offended [is harder to be won] than a strong city; And [such] contentions are like the bars of a castle.
- Bible in Basic English (BBE)
- A brother wounded is like a strong town, and violent acts are like a locked tower.
- Darby Translation (DBY)
- A brother offended is [harder to be won] than a strong city; and contentions are as the bars of a palace.
- Webster's Bible (WBS)
- A brother offended [is harder to be won] than a strong city: and [their] contentions [are] like the bars of a castle.
- Young's Literal Translation (YLT)
- A brother transgressed against is as a strong city, And contentions as the bar of a palace.
Read in context
- 17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- 18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
- 19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- 20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
- 21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
Cross references
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Acts 15:39 ಅಪೊಸ್ತಲರ ಕೃತ್ಯಗಳು 15:39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- Genesis 37:3–5 ಆದಿಕಾಂಡ 37:3–5ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು. ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು. ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
- Genesis 27:41–45 ಆದಿಕಾಂಡ 27:41–45ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು. ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ. ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು. ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು. ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Genesis 4:5–8 ಆದಿಕಾಂಡ 4:5–8ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- 2 Samuel 13:22 2 ಸಮುವೇಲನು 13:22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- Genesis 37:18–27 ಆದಿಕಾಂಡ 37:18–27ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು. ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು. ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು. ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು. ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು. ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು? ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
- 1 Kings 2:23–25 1 ಅರಸುಗಳು 2:23–25ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು. ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Genesis 32:6–11 ಆದಿಕಾಂಡ 32:6–11ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು. ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು. ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು. ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.