Proverbs · chapter 18 · verse 21
Proverbs 18:21 in Kannada
ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
Naaligeya vashadalli maranavoo jeevavoo ive; adannu preetisuvavaru adara phalavannu tinnuvaru.
Proverbs 18:21 in English
- King James Version (KJV)
- Death and life [are] in the power of the tongue: and they that love it shall eat the fruit thereof.
- World English Bible (WEB)
- Death and life are in the power of the tongue; those who love it will eat its fruit.
- American Standard Version (ASV)
- Death and life are in the power of the tongue; And they that love it shall eat the fruit thereof.
- Bible in Basic English (BBE)
- Death and life are in the power of the tongue; and those to whom it is dear will have its fruit for their food.
- Darby Translation (DBY)
- Death and life are in the power of the tongue, and they that love it shall eat the fruit thereof.
- Webster's Bible (WBS)
- Death and life [are] in the power of the tongue: and they that love it shall eat the fruit of it.
- Young's Literal Translation (YLT)
- Death and life [are] in the power of the tongue, And those loving it eat its fruit.
Read in context
- 19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- 20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
- 21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- 22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- 23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Cross references
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Matthew 12:35–37 ಮತ್ತಾಯನು 12:35–37ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Proverbs 10:19–21 ಜ್ಞಾನೋಕ್ತಿಗಳು 10:19–21ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು. ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- James 3:6–9 ಯಾಕೋಬನು 3:6–9ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- Proverbs 13:2–3 ಜ್ಞಾನೋಕ್ತಿಗಳು 13:2–3ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು. ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- Proverbs 10:31 ಜ್ಞಾನೋಕ್ತಿಗಳು 10:31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 18:4–7 ಜ್ಞಾನೋಕ್ತಿಗಳು 18:4–7ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ. ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ. ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Ecclesiastes 10:12–14 ಪ್ರಸಂಗಿ 10:12–14ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Proverbs 11:30 ಜ್ಞಾನೋಕ್ತಿಗಳು 11:30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.