Proverbs · chapter 18 · verse 22
Proverbs 18:22 in Kannada
ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
Patni yannu dorakisikondavanu olledannu sampaadisi davanaagi kartana dayeyannu honduttaane.
Proverbs 18:22 in English
- King James Version (KJV)
- [Whoso] findeth a wife findeth a good [thing], and obtaineth favour of the LORD.
- World English Bible (WEB)
- Whoever finds a wife finds a good thing, and obtains favor of the LORD.
- American Standard Version (ASV)
- Whoso findeth a wife findeth a good thing, And obtaineth favor of Jehovah.
- Bible in Basic English (BBE)
- Whoever gets a wife gets a good thing, and has the approval of the Lord.
- Darby Translation (DBY)
- Whoso hath found a wife hath found a good thing, and hath obtained favour from Jehovah.
- Webster's Bible (WBS)
- [Whoever] findeth a wife findeth a good [thing] , and obtaineth favor from the LORD.
- Young's Literal Translation (YLT)
- [Whoso] hath found a wife hath found good, And bringeth out good-will from Jehovah.
Read in context
- 20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
- 21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- 22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- 23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Cross references
- Proverbs 19:14 ಜ್ಞಾನೋಕ್ತಿಗಳು 19:14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Proverbs 31:10–31 ಜ್ಞಾನೋಕ್ತಿಗಳು 31:10–31ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ. ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ. ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು. ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ. ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ. ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ. ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ. ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ. ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ. ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ. ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ. ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ. ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು. ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ. ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು. ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು. ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ. ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- Ecclesiastes 9:9 ಪ್ರಸಂಗಿ 9:9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- 1 Corinthians 7:2 1 ಕೊರಿಂಥದವರಿಗೆ 7:2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- Proverbs 5:15–23 ಜ್ಞಾನೋಕ್ತಿಗಳು 5:15–23ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ? ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ. ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- Proverbs 8:35 ಜ್ಞಾನೋಕ್ತಿಗಳು 8:35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Genesis 29:20–21 ಆದಿಕಾಂಡ 29:20–21ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು. ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
- Proverbs 3:4 ಜ್ಞಾನೋಕ್ತಿಗಳು 3:4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- Genesis 24:67 ಆದಿಕಾಂಡ 24:67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.