Proverbs · chapter 18 · verse 3
Proverbs 18:3 in Kannada
ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
Dushtanu bandaaga taatsaaravoo avamaanadondige nindeyoo baruttave.
Proverbs 18:3 in English
- King James Version (KJV)
- When the wicked cometh, [then] cometh also contempt, and with ignominy reproach.
- World English Bible (WEB)
- When wickedness comes, contempt also comes, and with shame comes disgrace.
- American Standard Version (ASV)
- When the wicked cometh, there cometh also contempt, And with ignominy [cometh] reproach.
- Bible in Basic English (BBE)
- When the evil-doer comes, a low opinion comes with him, and with the loss of honour comes shame.
- Darby Translation (DBY)
- When the wicked cometh, there cometh also contempt, and with ignominy reproach.
- Webster's Bible (WBS)
- When the wicked cometh, [then] cometh also contempt, and with ignominy reproach.
- Young's Literal Translation (YLT)
- With the coming of the wicked come also hath contempt, And with shame — reproach.
Read in context
- 1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
- 2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
- 3ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
- 4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
- 5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
Cross references
- Proverbs 22:10 ಜ್ಞಾನೋಕ್ತಿಗಳು 22:10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Proverbs 11:2 ಜ್ಞಾನೋಕ್ತಿಗಳು 11:2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
- Proverbs 29:16 ಜ್ಞಾನೋಕ್ತಿಗಳು 29:16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
- Psalm 69:20 ಕೀರ್ತನೆಗಳು 69:20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Psalm 69:9 ಕೀರ್ತನೆಗಳು 69:9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- 1 Samuel 20:30 1 ಸಮುವೇಲನು 20:30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
- Nehemiah 4:4 ನೆಹೆಮೀಯ 4:4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- Matthew 27:39–44 ಮತ್ತಾಯನು 27:39–44ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.