Proverbs · chapter 18 · verse 5
Proverbs 18:5 in Kannada
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
Nanna nyaayateerpinalli neetivantarannu kedavuvante dushta rannu sveekarisuvadu yuktavalla.
Proverbs 18:5 in English
- King James Version (KJV)
- [It is] not good to accept the person of the wicked, to overthrow the righteous in judgment.
- World English Bible (WEB)
- To be partial to the faces of the wicked is not good, nor to deprive the innocent of justice.
- American Standard Version (ASV)
- To respect the person of the wicked is not good, [Nor] to turn aside the righteous in judgment.
- Bible in Basic English (BBE)
- To have respect for the person of the evil-doer is not good, or to give a wrong decision against the upright.
- Darby Translation (DBY)
- It is not good to accept the person of the wicked, to wrong the righteous in judgment.
- Webster's Bible (WBS)
- [It is] not good to accept the person of the wicked, to overthrow the righteous in judgment.
- Young's Literal Translation (YLT)
- Acceptance of the face of the wicked [is] not good, To turn aside the righteous in judgment.
Read in context
- 3ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
- 4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
- 5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
- 6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- 7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
Cross references
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Proverbs 28:21 ಜ್ಞಾನೋಕ್ತಿಗಳು 28:21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
- Psalm 82:2 ಕೀರ್ತನೆಗಳು 82:2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- Proverbs 24:23 ಜ್ಞಾನೋಕ್ತಿಗಳು 24:23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Deuteronomy 1:16–17 ಧರ್ಮೋಪದೇಶಕಾಂಡ 1:16–17ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Isaiah 5:23 ಯೆಶಾಯ 5:23ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
- 1 Kings 21:9–14 1 ಅರಸುಗಳು 21:9–14ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Job 13:7–8 ಯೋಬನು 13:7–8ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?