Proverbs · chapter 19 · verse 13
Proverbs 19:13 in Kannada
ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
Buddhiheenanaada maganu tanna tandege haanika ranu; hendatiya kalahagalu yaavaagaloo totti kkuva hanigalu.
Proverbs 19:13 in English
- King James Version (KJV)
- A foolish son [is] the calamity of his father: and the contentions of a wife [are] a continual dropping.
- World English Bible (WEB)
- A foolish son is the calamity of his father. A wife’s quarrels are a continual dripping.
- American Standard Version (ASV)
- A foolish son is the calamity of his father; And the contentions of a wife are a continual dropping.
- Bible in Basic English (BBE)
- A foolish son is the destruction of his father; and the bitter arguments of a wife are like drops of rain falling without end.
- Darby Translation (DBY)
- A foolish son is the calamity of his father; and the contentions of a wife are a continual dropping.
- Webster's Bible (WBS)
- A foolish son [is] the calamity of his father: and the contentions of a wife [are] a continual dropping.
- Young's Literal Translation (YLT)
- A calamity to his father [is] a foolish son, And the contentions of a wife [are] a continual dropping.
Read in context
- 11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- 12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- 13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- 14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- 15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
Cross references
- Proverbs 27:15 ಜ್ಞಾನೋಕ್ತಿಗಳು 27:15ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
- Proverbs 21:9 ಜ್ಞಾನೋಕ್ತಿಗಳು 21:9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Proverbs 25:24 ಜ್ಞಾನೋಕ್ತಿಗಳು 25:24ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
- Job 14:19 ಯೋಬನು 14:19ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
- Proverbs 21:19 ಜ್ಞಾನೋಕ್ತಿಗಳು 21:19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- 2 Samuel 13:1–18 2 ಸಮುವೇಲನು 13:1–18ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು. ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು. ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು. ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು. ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು. ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು. ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು. ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು. ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು. ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು. ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ. ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು. ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು. ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು. ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು. ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Proverbs 17:21 ಜ್ಞಾನೋಕ್ತಿಗಳು 17:21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Ecclesiastes 2:18–19 ಪ್ರಸಂಗಿ 2:18–19ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.