Proverbs · chapter 19 · verse 14
Proverbs 19:14 in Kannada
ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
Maneyoo aishvaryavoo pitrugala svaasthyavu; vivekiyaada hendatiyu karta nindale.
Proverbs 19:14 in English
- King James Version (KJV)
- House and riches [are] the inheritance of fathers: and a prudent wife [is] from the LORD.
- World English Bible (WEB)
- House and riches are an inheritance from fathers, but a prudent wife is from the LORD.
- American Standard Version (ASV)
- House and riches are an inheritance from fathers; But a prudent wife is from Jehovah.
- Bible in Basic English (BBE)
- House and wealth are a heritage from fathers, but a wife with good sense is from the Lord.
- Darby Translation (DBY)
- House and wealth are an inheritance from fathers; but a prudent wife is from Jehovah.
- Webster's Bible (WBS)
- House and riches [are] the inheritance of fathers: and a prudent wife [is] from the LORD.
- Young's Literal Translation (YLT)
- House and wealth [are] the inheritance of fathers, And from Jehovah [is] an understanding wife.
Read in context
- 12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- 13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- 14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- 15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- 16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
Cross references
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- Proverbs 31:10–31 ಜ್ಞಾನೋಕ್ತಿಗಳು 31:10–31ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ. ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ. ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು. ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ. ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ. ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ. ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ. ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ. ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ. ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ. ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ. ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ. ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು. ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ. ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು. ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು. ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ. ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 2 Corinthians 12:14 2 ಕೊರಿಂಥದವರಿಗೆ 12:14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
- Genesis 28:1–4 ಆದಿಕಾಂಡ 28:1–4ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು. ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Deuteronomy 21:16 ಧರ್ಮೋಪದೇಶಕಾಂಡ 21:16ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
- Genesis 24:7 ಆದಿಕಾಂಡ 24:7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.