Proverbs · chapter 19 · verse 17
Proverbs 19:17 in Kannada
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
Badavarige dayetorisu vavanu. Kartanige saala koduttaane; avanu kottaddannu aatanu tirugi avanige koduttaane.
Proverbs 19:17 in English
- King James Version (KJV)
- He that hath pity upon the poor lendeth unto the LORD; and that which he hath given will he pay him again.
- World English Bible (WEB)
- He who has pity on the poor lends to the LORD; he will reward him.
- American Standard Version (ASV)
- He that hath pity upon the poor lendeth unto Jehovah, And his good deed will he pay him again.
- Bible in Basic English (BBE)
- He who has pity on the poor gives to the Lord, and the Lord will give him his reward.
- Darby Translation (DBY)
- He that is gracious to the poor lendeth unto Jehovah; and what he hath bestowed will he repay unto him.
- Webster's Bible (WBS)
- He that hath pity upon the poor, lendeth to the LORD; and that which he hath given will he pay him again.
- Young's Literal Translation (YLT)
- Whoso is lending [to] Jehovah is favouring the poor, And his deed He repayeth to him.
Read in context
- 15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- 16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
- 17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- 19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
Cross references
- Proverbs 28:27 ಜ್ಞಾನೋಕ್ತಿಗಳು 28:27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- 2 Corinthians 9:6–8 2 ಕೊರಿಂಥದವರಿಗೆ 9:6–8ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Ecclesiastes 11:1 ಪ್ರಸಂಗಿ 11:1ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
- Matthew 10:41–42 ಮತ್ತಾಯನು 10:41–42ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Isaiah 58:7–11 ಯೆಶಾಯ 58:7–11ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Philippians 4:17 ಫಿಲಿಪ್ಪಿಯವರಿಗೆ 4:17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.