Proverbs · chapter 19 · verse 22
Proverbs 19:22 in Kannada
ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
Manushyana aakaanksheyu aatana dayeye; badavanu sullugaaraniginta olleyavanu.
Proverbs 19:22 in English
- King James Version (KJV)
- The desire of a man [is] his kindness: and a poor man [is] better than a liar.
- World English Bible (WEB)
- That which makes a man to be desired is his kindness. A poor man is better than a liar.
- American Standard Version (ASV)
- That which maketh a man to be desired is his kindness; And a poor man is better than a liar.
- Bible in Basic English (BBE)
- The ornament of a man is his mercy, and a poor man is better than one who is false.
- Darby Translation (DBY)
- The charm of a man is his kindness; and a poor [man] is better than a liar.
- Webster's Bible (WBS)
- The desire of a man [is] his kindness: and a poor man [is] better than a liar.
- Young's Literal Translation (YLT)
- The desirableness of a man [is] his kindness, And better [is] the poor than a liar.
Read in context
- 20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- 21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- 22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- 23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- 24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
Cross references
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Mark 14:6–8 ಮಾರ್ಕನು 14:6–8ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- 2 Chronicles 6:8 2 ಪೂರ್ವಕಾಲವೃತ್ತಾಂತ 6:8ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
- Mark 12:41–44 ಮಾರ್ಕನು 12:41–44ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Proverbs 19:1 ಜ್ಞಾನೋಕ್ತಿಗಳು 19:1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 2 Corinthians 8:2–3 2 ಕೊರಿಂಥದವರಿಗೆ 8:2–3ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- 1 Chronicles 29:2–3 1 ಪೂರ್ವಕಾಲವೃತ್ತಾಂತ 29:2–3ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Job 17:5 ಯೋಬನು 17:5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- Job 6:15 ಯೋಬನು 6:15ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.