Proverbs · chapter 19 · verse 27
Proverbs 19:27 in Kannada
ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
Nanna magane, tiluvalikeya maatugalinda daari tappisuva bodhaneyannu keladiru.
Proverbs 19:27 in English
- King James Version (KJV)
- Cease, my son, to hear the instruction [that causeth] to err from the words of knowledge.
- World English Bible (WEB)
- If you stop listening to instruction, my son, you will stray from the words of knowledge.
- American Standard Version (ASV)
- Cease, my son, to hear instruction [Only] to err from the words of knowledge.
- Bible in Basic English (BBE)
- A son who no longer gives attention to teaching is turned away from the words of knowledge.
- Darby Translation (DBY)
- Cease, my son, to hear the instruction which causeth to stray from the words of knowledge.
- Webster's Bible (WBS)
- Cease, my son, to hear the instruction [that causeth] to err from the words of knowledge.
- Young's Literal Translation (YLT)
- Cease, my son, to hear instruction — To err from sayings of knowledge.
Read in context
- 25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- 26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- 27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- 28ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- 29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Cross references
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Mark 4:24 ಮಾರ್ಕನು 4:24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- Proverbs 14:7 ಜ್ಞಾನೋಕ್ತಿಗಳು 14:7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- John 10:5 ಯೋಹಾನನು 10:5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
- 1 Timothy 4:7 1 ತಿಮೊಥೆಯನಿಗೆ 4:7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
- Deuteronomy 13:1–4 ಧರ್ಮೋಪದೇಶಕಾಂಡ 13:1–4ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ. ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
- 2 Peter 2:1–2 2 ಪೇತ್ರನು 2:1–2ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Matthew 16:12 ಮತ್ತಾಯನು 16:12ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.