Proverbs · chapter 19 · verse 3
Proverbs 19:3 in Kannada
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
Manushyana buddhiheenate tanna daariyannu tappisuttade; avana hrudayavu kartanige virodhavaagi urigolluttade.
Proverbs 19:3 in English
- King James Version (KJV)
- The foolishness of man perverteth his way: and his heart fretteth against the LORD.
- World English Bible (WEB)
- The foolishness of man subverts his way; his heart rages against the LORD.
- American Standard Version (ASV)
- The foolishness of man subverteth his way; And his heart fretteth against Jehovah.
- Bible in Basic English (BBE)
- By his foolish behaviour a man's ways are turned upside down, and his heart is bitter against the Lord.
- Darby Translation (DBY)
- The folly of man distorteth his way, and his heart is irritated against Jehovah.
- Webster's Bible (WBS)
- The foolishness of man perverteth his way: and his heart fretteth against the LORD.
- Young's Literal Translation (YLT)
- The folly of man perverteth his way, And against Jehovah is his heart wroth.
Read in context
- 1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- 2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- 3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
- 4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- 5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
Cross references
- Revelation 16:9–11 ಪ್ರಕಟನೆ 16:9–11ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Proverbs 11:3 ಜ್ಞಾನೋಕ್ತಿಗಳು 11:3ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
- 2 Chronicles 16:9–10 2 ಪೂರ್ವಕಾಲವೃತ್ತಾಂತ 16:9–10ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 1 Samuel 22:13–23 1 ಸಮುವೇಲನು 22:13–23ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು. ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು. ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು. ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- Numbers 16:19–41 ಅರಣ್ಯಕಾಂಡ 16:19–41ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು. ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ-- ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು. ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು-- ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು. ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು. ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು. ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು. ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು. ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು. ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು. ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- 2 Kings 3:9–10 2 ಅರಸುಗಳು 3:9–10ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು. ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
- Acts 13:45–46 ಅಪೊಸ್ತಲರ ಕೃತ್ಯಗಳು 13:45–46ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- 2 Kings 6:33 2 ಅರಸುಗಳು 6:33ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- 1 Kings 20:42–43 1 ಅರಸುಗಳು 20:42–43ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು. ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.