Proverbs · chapter 2 · verse 12
Proverbs 2:12 in Kannada
ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
Kedukana maargadinda moorkhana maatugalinda
Proverbs 2:12 in English
- King James Version (KJV)
- To deliver thee from the way of the evil [man], from the man that speaketh froward things;
- World English Bible (WEB)
- to deliver you from the way of evil, from the men who speak perverse things,
- American Standard Version (ASV)
- To deliver thee from the way of evil, From the men that speak perverse things;
- Bible in Basic English (BBE)
- Giving you salvation from the evil man, from those whose words are false;
- Darby Translation (DBY)
- To deliver thee from the way of evil, from the man that speaketh froward things;
- Webster's Bible (WBS)
- To deliver thee from the way of the evil [man] , from the man that speaketh froward things;
- Young's Literal Translation (YLT)
- To deliver thee from an evil way, From any speaking froward things,
Read in context
- 10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- 11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- 12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- 13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
- 14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
Cross references
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Isaiah 59:3–5 ಯೆಶಾಯ 59:3–5ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
- Proverbs 16:28–30 ಜ್ಞಾನೋಕ್ತಿಗಳು 16:28–30ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ. ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ. ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
- Psalm 17:4–5 ಕೀರ್ತನೆಗಳು 17:4–5ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Proverbs 1:10–19 ಜ್ಞಾನೋಕ್ತಿಗಳು 1:10–19ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Proverbs 4:14–17 ಜ್ಞಾನೋಕ್ತಿಗಳು 4:14–17ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ. ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ. ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು. ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- Psalm 141:4 ಕೀರ್ತನೆಗಳು 141:4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.