Proverbs · chapter 2 · verse 16
Proverbs 2:16 in Kannada
ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
Parastree yinda andare tanna maatugalinda mukhastuti maaduva streeyinda tanna devara odambadike yannu maretu
Proverbs 2:16 in English
- King James Version (KJV)
- To deliver thee from the strange woman, [even] from the stranger [which] flattereth with her words;
- World English Bible (WEB)
- to deliver you from the strange woman, even from the foreigner who flatters with her words,
- American Standard Version (ASV)
- To deliver thee from the strange woman, Even from the foreigner that flattereth with her words;
- Bible in Basic English (BBE)
- To take you out of the power of the strange woman, who says smooth words with her tongue;
- Darby Translation (DBY)
- To deliver thee from the strange woman, from the stranger who flattereth with her words;
- Webster's Bible (WBS)
- To deliver thee from the strange woman, [even] from the stranger [who] flattereth with her words;
- Young's Literal Translation (YLT)
- To deliver thee from the strange woman, From the stranger who hath made smooth her sayings,
Read in context
- 14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
- 15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- 16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- 17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- 18ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
Cross references
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Proverbs 7:5–23 ಜ್ಞಾನೋಕ್ತಿಗಳು 7:5–23ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು. ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು. ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು. ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು. (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು). ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ. ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ. ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ. ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Proverbs 23:27 ಜ್ಞಾನೋಕ್ತಿಗಳು 23:27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
- Proverbs 6:24 ಜ್ಞಾನೋಕ್ತಿಗಳು 6:24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- Proverbs 22:14 ಜ್ಞಾನೋಕ್ತಿಗಳು 22:14ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
- Nehemiah 13:26–27 ನೆಹೆಮೀಯ 13:26–27ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು. ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
- Genesis 39:3–12 ಆದಿಕಾಂಡ 39:3–12ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು. ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು. ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು. ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ. ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
- Proverbs 5:3–20 ಜ್ಞಾನೋಕ್ತಿಗಳು 5:3–20ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ. ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ. ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ. ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ. ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ. ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ. ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.