Proverbs · chapter 2 · verse 18
Proverbs 2:18 in Kannada
ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
Avala maneyu maranada kadege, avala daari galu mrutara kadege ilisuttave.
Proverbs 2:18 in English
- King James Version (KJV)
- For her house inclineth unto death, and her paths unto the dead.
- World English Bible (WEB)
- for her house leads down to death, her paths to the departed spirits.
- American Standard Version (ASV)
- For her house inclineth unto death, And her paths unto the dead;
- Bible in Basic English (BBE)
- For her house is on the way down to death; her footsteps go down to the shades:
- Darby Translation (DBY)
- — for her house inclineth unto death, and her paths unto the dead;
- Webster's Bible (WBS)
- For her house inclineth to death, and her paths to the dead.
- Young's Literal Translation (YLT)
- For her house hath inclined unto death, And unto Rephaim her paths.
Read in context
- 16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- 17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- 18ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
- 19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- 20ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
Cross references
- Proverbs 9:18 ಜ್ಞಾನೋಕ್ತಿಗಳು 9:18ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Proverbs 5:4–14 ಜ್ಞಾನೋಕ್ತಿಗಳು 5:4–14ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ. ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ. ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ. ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ. ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- Proverbs 7:22–27 ಜ್ಞಾನೋಕ್ತಿಗಳು 7:22–27ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ. ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 6:26–35 ಜ್ಞಾನೋಕ್ತಿಗಳು 6:26–35ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ? ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ? ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು. ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ. ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು. ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು. ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು. ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ. ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.