Proverbs · chapter 20 · verse 25
Proverbs 20:25 in Kannada
ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
Parishuddhavaadaddannu nungidavanaagi taruvaaya vichaarisuvadakkaagi aaneyittu kolluvadu obba manushyanige urlaa gide.
Proverbs 20:25 in English
- King James Version (KJV)
- [It is] a snare to the man [who] devoureth [that which is] holy, and after vows to make enquiry.
- World English Bible (WEB)
- It is a snare to a man to make a rash dedication, then later to consider his vows.
- American Standard Version (ASV)
- It is a snare to a man rashly to say, [It is] holy, And after vows to make inquiry.
- Bible in Basic English (BBE)
- It is a danger to a man to say without thought, It is holy, and, after taking his oaths, to be questioning if it is necessary to keep them.
- Darby Translation (DBY)
- It is a snare to a man rashly to say, It is hallowed, and after vows to make inquiry.
- Webster's Bible (WBS)
- [It is] a snare to the man [who] devoureth [that which is] holy, and after vows to make inquiry.
- Young's Literal Translation (YLT)
- A snare to a man [is] he hath swallowed a holy thing, And after vows to make inquiry.
Read in context
- 23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
- 24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
- 25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- 26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- 27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
Cross references
- Ecclesiastes 5:4–6 ಪ್ರಸಂಗಿ 5:4–6ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು. ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
- Matthew 5:33 ಮತ್ತಾಯನು 5:33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
- Leviticus 27:9–10 ಯಾಜಕಕಾಂಡ 27:9–10ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು. ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು.
- Numbers 30:2–16 ಅರಣ್ಯಕಾಂಡ 30:2–16ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು. ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು. ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು. ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು. ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು. ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು. ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು. ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು. ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು. ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ. ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ. ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
- Proverbs 18:7 ಜ್ಞಾನೋಕ್ತಿಗಳು 18:7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Leviticus 22:10–15 ಯಾಜಕಕಾಂಡ 22:10–15ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ. ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು. ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
- Malachi 3:8–10 ಮಲಾಕಿಯ 3:8–10ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 27:30–31 ಯಾಜಕಕಾಂಡ 27:30–31ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.