Proverbs · chapter 21 · verse 22
Proverbs 21:22 in Kannada
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
Jnyaaniyu balishthara pattanavannu hatti adaralli bharavasavittu balavannu kedavi haaku ttaane.
Proverbs 21:22 in English
- King James Version (KJV)
- A wise [man] scaleth the city of the mighty, and casteth down the strength of the confidence thereof.
- World English Bible (WEB)
- A wise man scales the city of the mighty, and brings down the strength of its confidence.
- American Standard Version (ASV)
- A wise man scaleth the city of the mighty, And bringeth down the strength of the confidence thereof.
- Bible in Basic English (BBE)
- A wise man goes up into the town of the strong ones, and overcomes its strength in which they put their faith.
- Darby Translation (DBY)
- A wise [man] scaleth the city of the mighty, and casteth down the strength of the confidence thereof.
- Webster's Bible (WBS)
- A wise [man] scaleth the city of the mighty, and casteth down the strength of its confidence.
- Young's Literal Translation (YLT)
- A city of the mighty hath the wise gone up, And bringeth down the strength of its confidence.
Read in context
- 20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- 21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
- 22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
- 23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
Cross references
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- Proverbs 24:5 ಜ್ಞಾನೋಕ್ತಿಗಳು 24:5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- Ecclesiastes 9:13–18 ಪ್ರಸಂಗಿ 9:13–18ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು. ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ. ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 2 Samuel 20:16–22 2 ಸಮುವೇಲನು 20:16–22ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು. ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು. ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು. ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು. ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ. ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- 2 Samuel 5:6–9 2 ಸಮುವೇಲನು 5:6–9ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು. ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು. ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು. ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.