Proverbs · chapter 21 · verse 23
Proverbs 21:23 in Kannada
ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
Tanna baayiyannu naaligeyannu kaayuva vanu ikkattugalinda tanna praanavannu kaapaadi kolluttaane.
Proverbs 21:23 in English
- King James Version (KJV)
- Whoso keepeth his mouth and his tongue keepeth his soul from troubles.
- World English Bible (WEB)
- Whoever guards his mouth and his tongue keeps his soul from troubles.
- American Standard Version (ASV)
- Whoso keepeth his mouth and his tongue Keepeth his soul from troubles.
- Bible in Basic English (BBE)
- He who keeps watch over his mouth and his tongue keeps his soul from troubles.
- Darby Translation (DBY)
- Whoso keepeth his mouth and his tongue keepeth his soul from troubles.
- Webster's Bible (WBS)
- Whoever keepeth his mouth and his tongue keepeth his soul from troubles.
- Young's Literal Translation (YLT)
- Whoso is keeping his mouth and his tongue, Is keeping from adversities his soul.
Read in context
- 21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
- 22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
- 23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- 25ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
Cross references
- Proverbs 13:3 ಜ್ಞಾನೋಕ್ತಿಗಳು 13:3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Proverbs 17:27–28 ಜ್ಞಾನೋಕ್ತಿಗಳು 17:27–28ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು. ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- James 3:2–13 ಯಾಕೋಬನು 3:2–13ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು. ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ? ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು. ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.