Proverbs · chapter 21 · verse 26
Proverbs 21:26 in Kannada
ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
Dinavellaa avanu duraasheyinda aashisuttaane; aadare neetivantanu hintegeyade koduttaane.
Proverbs 21:26 in English
- King James Version (KJV)
- He coveteth greedily all the day long: but the righteous giveth and spareth not.
- World English Bible (WEB)
- There are those who covet greedily all day long; but the righteous give and don’t withhold.
- American Standard Version (ASV)
- There is that coveteth greedily all the day long; But the righteous giveth and withholdeth not.
- Bible in Basic English (BBE)
- All the day the sinner goes after his desire: but the upright man gives freely, keeping nothing back.
- Darby Translation (DBY)
- He coveteth greedily all the day long; but the righteous giveth and spareth not.
- Webster's Bible (WBS)
- He coveteth greedily all the day long: but the righteous giveth and spareth not.
- Young's Literal Translation (YLT)
- All the day desiring he hath desired, And the righteous giveth and withholdeth not.
Read in context
- 24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- 25ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
- 26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
- 27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- 28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
Cross references
- Psalm 37:26 ಕೀರ್ತನೆಗಳು 37:26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Acts 20:33–35 ಅಪೊಸ್ತಲರ ಕೃತ್ಯಗಳು 20:33–35ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ. ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- 1 Thessalonians 2:5–9 1 ಥೆಸಲೊನೀಕದವರಿಗೆ 2:5–9ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ. ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು. ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು. ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- Matthew 5:42 ಮತ್ತಾಯನು 5:42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- 2 Corinthians 8:7–9 2 ಕೊರಿಂಥದವರಿಗೆ 8:7–9ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Luke 6:30–36 ಲೂಕನು 6:30–36ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ. ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ. ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ. ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ, ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- 2 Corinthians 9:9–14 2 ಕೊರಿಂಥದವರಿಗೆ 9:9–14(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.