Proverbs · chapter 21 · verse 3
Proverbs 21:3 in Kannada
ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
Yajnyakkinta neetinyaayagalannu nadisuvadu karta nige eshto mechchikeyaagide.
Proverbs 21:3 in English
- King James Version (KJV)
- To do justice and judgment [is] more acceptable to the LORD than sacrifice.
- World English Bible (WEB)
- To do righteousness and justice is more acceptable to the LORD than sacrifice.
- American Standard Version (ASV)
- To do righteousness and justice Is more acceptable to Jehovah than sacrifice.
- Bible in Basic English (BBE)
- To do what is right and true is more pleasing to the Lord than an offering.
- Darby Translation (DBY)
- To exercise justice and judgment is more acceptable to Jehovah than sacrifice.
- Webster's Bible (WBS)
- To do justice and judgment [is] more acceptable to the LORD than sacrifice.
- Young's Literal Translation (YLT)
- To do righteousness and judgment, Is chosen of Jehovah rather than sacrifice.
Read in context
- 1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- 3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- 4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- 5ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
Cross references
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- Hosea 6:6 ಹೋಶೇಯ 6:6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- Micah 6:6–8 ಮೀಕ 6:6–8ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Mark 12:33 ಮಾರ್ಕನು 12:33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Isaiah 1:11–17 ಯೆಶಾಯ 1:11–17ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Jeremiah 7:21–23 ಯೆರೆಮೀಯ 7:21–23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Psalm 50:8 ಕೀರ್ತನೆಗಳು 50:8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.