Proverbs · chapter 22 · verse 14
Proverbs 22:14 in Kannada
ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
Parastreeya baayi aalavaada kuni; kartanige asahyavaadavanu adaralli beeluvanu.
Proverbs 22:14 in English
- King James Version (KJV)
- The mouth of strange women [is] a deep pit: he that is abhorred of the LORD shall fall therein.
- World English Bible (WEB)
- The mouth of an adulteress is a deep pit. He who is under the LORD’s wrath will fall into it.
- American Standard Version (ASV)
- The mouth of strange women is a deep pit; He that is abhorred of Jehovah shall fall therein.
- Bible in Basic English (BBE)
- The mouth of strange women is a deep hole: he with whom the Lord is angry will go down into it.
- Darby Translation (DBY)
- The mouth of strange women is a deep ditch: he with whom Jehovah is displeased shall fall therein.
- Webster's Bible (WBS)
- The mouth of strange women [is] a deep pit: he that is abhorred by the LORD shall fall therein.
- Young's Literal Translation (YLT)
- A deep pit [is] the mouth of strange women, The abhorred of Jehovah falleth there.
Read in context
- 12ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
- 13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- 14ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
- 15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- 16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
Cross references
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Proverbs 23:27 ಜ್ಞಾನೋಕ್ತಿಗಳು 23:27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
- Proverbs 6:24–29 ಜ್ಞಾನೋಕ್ತಿಗಳು 6:24–29ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು. ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ. ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು. ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ? ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ? ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
- Nehemiah 13:26 ನೆಹೆಮೀಯ 13:26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- Proverbs 7:5–27 ಜ್ಞಾನೋಕ್ತಿಗಳು 7:5–27ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು. ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು. ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು. ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು. (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ. ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು). ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ. ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ. ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ. ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ. ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 2:16–19 ಜ್ಞಾನೋಕ್ತಿಗಳು 2:16–19ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು. ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- Judges 16:20–21 ನ್ಯಾಯಸ್ಥಾಪಕರು 16:20–21ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು. ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- Proverbs 5:3–23 ಜ್ಞಾನೋಕ್ತಿಗಳು 5:3–23ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ. ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ. ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ. ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ. ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ. ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ. ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ? ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ. ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Deuteronomy 32:19 ಧರ್ಮೋಪದೇಶಕಾಂಡ 32:19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.