Proverbs · chapter 22 · verse 9
Proverbs 22:9 in Kannada
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
Dayaadrushtiyullavanu aashee rvaadavannu honduvanu; tanagidda aahaaradalli badavarige koduttaane.
Proverbs 22:9 in English
- King James Version (KJV)
- He that hath a bountiful eye shall be blessed; for he giveth of his bread to the poor.
- World English Bible (WEB)
- He who has a generous eye will be blessed, for he shares his food with the poor.
- American Standard Version (ASV)
- He that hath a bountiful eye shall be blessed; For he giveth of his bread to the poor.
- Bible in Basic English (BBE)
- He who is kind will have a blessing, for he gives of his bread to the poor.
- Darby Translation (DBY)
- He that hath a bountiful eye shall be blessed, for he giveth of his bread to the poor.
- Webster's Bible (WBS)
- He that hath a bountiful eye shall be blessed; for he giveth of his bread to the poor.
- Young's Literal Translation (YLT)
- The good of eye — he is blessed, For he hath given of his bread to the poor.
Read in context
- 7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
- 8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- 9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- 10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- 11ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
Cross references
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 1 Timothy 6:18–19 1 ತಿಮೊಥೆಯನಿಗೆ 6:18–19ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು. ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Luke 14:13 ಲೂಕನು 14:13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Deuteronomy 15:7–11 ಧರ್ಮೋಪದೇಶಕಾಂಡ 15:7–11ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- 2 Corinthians 9:6–11 2 ಕೊರಿಂಥದವರಿಗೆ 9:6–11ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Isaiah 58:7–12 ಯೆಶಾಯ 58:7–12ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.