Proverbs · chapter 23 · verse 29
Proverbs 23:29 in Kannada
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
Yaarige ayyo? Yaarige duhkha? Yaarige kalahagalu? Yaaru golaaduttaare? Yaaru summasummane gaaya paduttaare? Yaarige kempe rida kannugalu?
Proverbs 23:29 in English
- King James Version (KJV)
- Who hath woe? who hath sorrow? who hath contentions? who hath babbling? who hath wounds without cause? who hath redness of eyes?
- World English Bible (WEB)
- Who has woe? Who has sorrow? Who has strife? Who has complaints? Who has needless bruises? Who has bloodshot eyes?
- American Standard Version (ASV)
- Who hath woe? who hath sorrow? who hath contentions? Who hath complaining? who hath wounds without cause? Who hath redness of eyes?
- Bible in Basic English (BBE)
- Who says, Oh! who says, Ah! who has violent arguments, who has grief, who has wounds without cause, whose eyes are dark?
- Darby Translation (DBY)
- Who hath woe? Who hath sorrow? Who contentions? Who complaining? Who wounds without cause? Who redness of eyes?
- Webster's Bible (WBS)
- Who hath woe? who hath sorrow? who hath contentions? who hath babbling? who hath wounds without cause? who hath redness of eyes?
- Young's Literal Translation (YLT)
- Who hath woe? who hath sorrow? Who hath contentions? who hath plaint? Who hath wounds without cause? Who hath redness of eyes?
Read in context
- 27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
- 28ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
- 29ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
- 30ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- 31ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
Cross references
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- 1 Samuel 25:36–37 1 ಸಮುವೇಲನು 25:36–37ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
- Luke 12:45–46 ಲೂಕನು 12:45–46ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Isaiah 5:11 ಯೆಶಾಯ 5:11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- Proverbs 23:21 ಜ್ಞಾನೋಕ್ತಿಗಳು 23:21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Matthew 24:49–50 ಮತ್ತಾಯನು 24:49–50ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 1 Kings 20:16–22 1 ಅರಸುಗಳು 20:16–22ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು. ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು. ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು. ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು. ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು. ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು. ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.