Proverbs · chapter 23 · verse 7
Proverbs 23:7 in Kannada
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
Avanu tanna hrudayadalli yochisuvanteye iddaane; avanu --tinnu, kudi endu heluttaane; avana hrudayavu ninnondigilla.
Proverbs 23:7 in English
- King James Version (KJV)
- For as he thinketh in his heart, so [is] he: Eat and drink, saith he to thee; but his heart [is] not with thee.
- World English Bible (WEB)
- for as he thinks about the cost, so he is. “Eat and drink!” he says to you, but his heart is not with you.
- American Standard Version (ASV)
- For as he thinketh within himself, so is he: Eat and drink, saith he to thee; But his heart is not with thee.
- Bible in Basic English (BBE)
- For as the thoughts of his heart are, so is he: Take food and drink, he says to you; but his heart is not with you.
- Darby Translation (DBY)
- For as he thinketh in his soul, so is he. Eat and drink! will he say unto thee; but his heart is not with thee.
- Webster's Bible (WBS)
- For as he thinketh in his heart, so [is] he: Eat and drink, saith he to thee; but his heart [is] not with thee.
- Young's Literal Translation (YLT)
- For as he hath thought in his soul, so [is] he, 'Eat and drink,' saith he to thee, And his heart [is] not with thee.
Read in context
- 5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- 6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
- 7ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
- 8ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
- 9ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
Cross references
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Judges 16:15 ನ್ಯಾಯಸ್ಥಾಪಕರು 16:15ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
- Matthew 9:3–4 ಮತ್ತಾಯನು 9:3–4ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು. ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- Luke 11:37–54 ಲೂಕನು 11:37–54ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು. ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು. ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ? ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು. ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು. ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು. ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು. ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ. ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು. ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Daniel 11:27 ದಾನಿಯೇಲನು 11:27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
- Proverbs 19:22 ಜ್ಞಾನೋಕ್ತಿಗಳು 19:22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- 2 Samuel 13:26–28 2 ಸಮುವೇಲನು 13:26–28ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.