Proverbs · chapter 23 · verse 9
Proverbs 23:9 in Kannada
ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
Buddhi heenana sangada maataadabeda; ninna maatugala jnyaanavannu avanu tiraskarisuvanu.
Proverbs 23:9 in English
- King James Version (KJV)
- Speak not in the ears of a fool: for he will despise the wisdom of thy words.
- World English Bible (WEB)
- Don’t speak in the ears of a fool, for he will despise the wisdom of your words.
- American Standard Version (ASV)
- Speak not in the hearing of a fool; For he will despise the wisdom of thy words.
- Bible in Basic English (BBE)
- Say nothing in the hearing of a foolish man, for he will put no value on the wisdom of your words.
- Darby Translation (DBY)
- Speak not in the ears of a foolish [man], for he will despise the wisdom of thy words.
- Webster's Bible (WBS)
- Speak not in the ears of a fool: for he will despise the wisdom of thy words.
- Young's Literal Translation (YLT)
- In the ears of a fool speak not, For he treadeth on the wisdom of thy words.
Read in context
- 7ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
- 8ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
- 9ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
- 10ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
- 11ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
Cross references
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Proverbs 26:4–5 ಜ್ಞಾನೋಕ್ತಿಗಳು 26:4–5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ. ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- 1 Corinthians 1:21–24 1 ಕೊರಿಂಥದವರಿಗೆ 1:21–24ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- John 8:52 ಯೋಹಾನನು 8:52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- Acts 13:45–46 ಅಪೊಸ್ತಲರ ಕೃತ್ಯಗಳು 13:45–46ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Isaiah 36:21 ಯೆಶಾಯ 36:21ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- Acts 28:25–28 ಅಪೊಸ್ತಲರ ಕೃತ್ಯಗಳು 28:25–28ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- John 10:20 ಯೋಹಾನನು 10:20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
- Acts 17:18 ಅಪೊಸ್ತಲರ ಕೃತ್ಯಗಳು 17:18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- Luke 16:14 ಲೂಕನು 16:14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.