Proverbs · chapter 24 · verse 1
Proverbs 24:1 in Kannada
ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
Kettavarige virodhavaagi neenu asooyepadadiru; illave avara sangada iruvadakke apekshisabeda;
Proverbs 24:1 in English
- King James Version (KJV)
- Be not thou envious against evil men, neither desire to be with them.
- World English Bible (WEB)
- Don’t be envious of evil men, neither desire to be with them;
- American Standard Version (ASV)
- Be not thou envious against evil men; Neither desire to be with them:
- Bible in Basic English (BBE)
- Have no envy for evil men, or any desire to be with them:
- Darby Translation (DBY)
- Be not thou envious of evil men, neither desire to be with them;
- Webster's Bible (WBS)
- Be not thou envious against evil men, neither desire to be with them.
- Young's Literal Translation (YLT)
- Be not envious of evil men, And desire not to be with them.
Read in context
- 1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- 2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- 3ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
Cross references
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Proverbs 3:31 ಜ್ಞಾನೋಕ್ತಿಗಳು 3:31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Psalm 73:3 ಕೀರ್ತನೆಗಳು 73:3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- Proverbs 24:19 ಜ್ಞಾನೋಕ್ತಿಗಳು 24:19ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
- Proverbs 1:11–15 ಜ್ಞಾನೋಕ್ತಿಗಳು 1:11–15ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- Genesis 19:1–11 ಆದಿಕಾಂಡ 19:1–11ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು. ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು. ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು. ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು-- ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ. ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು. ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು. ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು. ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
- Psalm 26:9 ಕೀರ್ತನೆಗಳು 26:9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.