Proverbs · chapter 24 · verse 15
Proverbs 24:15 in Kannada
ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
Dushtane, neetivantana nivaasakke honchuhaakabeda; avana vishraantiya sthalavannu sooremaadabeda;
Proverbs 24:15 in English
- King James Version (KJV)
- Lay not wait, O wicked [man], against the dwelling of the righteous; spoil not his resting place:
- World English Bible (WEB)
- Don’t lay in wait, wicked man, against the habitation of the righteous. Don’t destroy his resting place;
- American Standard Version (ASV)
- Lay not wait, O wicked man, against the habitation of the righteous; Destroy not his resting-place:
- Bible in Basic English (BBE)
- Do not keep a secret watch, O evil-doer, against the fields of the upright man, or send destruction on his resting-place:
- Darby Translation (DBY)
- Lay not wait, O wicked [man], against the dwelling of the righteous; lay not waste his resting-place.
- Webster's Bible (WBS)
- Lay not wait, O wicked [man] , against the dwelling of the righteous; destroy not his resting-place:
- Young's Literal Translation (YLT)
- Lay not wait, O wicked one, At the habitation of the righteous. Do not spoil his resting-place.
Read in context
- 13ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
- 14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- 15ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
- 16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
Cross references
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- 1 Samuel 23:20–23 1 ಸಮುವೇಲನು 23:20–23ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು. ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ. ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ; ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
- Matthew 26:4 ಮತ್ತಾಯನು 26:4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Isaiah 32:18 ಯೆಶಾಯ 32:18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- 1 Samuel 9:11 1 ಸಮುವೇಲನು 9:11ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
- Psalm 56:6 ಕೀರ್ತನೆಗಳು 56:6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- Psalm 59:3 ಕೀರ್ತನೆಗಳು 59:3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.