Proverbs · chapter 24 · verse 16
Proverbs 24:16 in Kannada
ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
Neeti vantanu elu saari biddaroo matte eluttaane; aadare dushtanu kedige beeluvanu.
Proverbs 24:16 in English
- King James Version (KJV)
- For a just [man] falleth seven times, and riseth up again: but the wicked shall fall into mischief.
- World English Bible (WEB)
- for a righteous man falls seven times and rises up again, but the wicked are overthrown by calamity.
- American Standard Version (ASV)
- For a righteous man falleth seven times, and riseth up again; But the wicked are overthrown by calamity.
- Bible in Basic English (BBE)
- For an upright man, after falling seven times, will get up again: but trouble is the downfall of the evil.
- Darby Translation (DBY)
- For the righteous falleth seven times, and riseth up again; but the wicked stumble into disaster.
- Webster's Bible (WBS)
- For a just [man] falleth seven times, and riseth again: but the wicked shall fall into mischief.
- Young's Literal Translation (YLT)
- For seven [times] doth the righteous fall and rise, And the wicked stumble in evil.
Read in context
- 14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- 15ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
- 16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- 18ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
Cross references
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Micah 7:8–10 ಮೀಕ 7:8–10ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Job 5:19 ಯೋಬನು 5:19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- 2 Corinthians 4:8–12 2 ಕೊರಿಂಥದವರಿಗೆ 4:8–12ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- 2 Corinthians 11:23–27 2 ಕೊರಿಂಥದವರಿಗೆ 11:23–27ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Revelation 18:20–21 ಪ್ರಕಟನೆ 18:20–21ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Proverbs 13:17 ಜ್ಞಾನೋಕ್ತಿಗಳು 13:17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.