Proverbs · chapter 24 · verse 2
Proverbs 24:2 in Kannada
ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
Avara hrudayavu naashanavannu abhyaasisuttade; avara tutigalu haani yannu prastaapisuttave.
Proverbs 24:2 in English
- King James Version (KJV)
- For their heart studieth destruction, and their lips talk of mischief.
- World English Bible (WEB)
- for their hearts plot violence and their lips talk about mischief.
- American Standard Version (ASV)
- For their heart studieth oppression, And their lips talk of mischief.
- Bible in Basic English (BBE)
- For the purposes of their hearts are destruction, and their lips are talking of trouble.
- Darby Translation (DBY)
- for their heart studieth destruction, and their lips talk of mischief.
- Webster's Bible (WBS)
- For their heart studieth destruction, and their lips talk of mischief.
- Young's Literal Translation (YLT)
- For destruction doth their heart meditate, And perverseness do their lips speak.
Read in context
- 1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- 2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- 3ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
- 4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
Cross references
- Psalm 7:14 ಕೀರ್ತನೆಗಳು 7:14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
- Psalm 10:7 ಕೀರ್ತನೆಗಳು 10:7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
- Psalm 28:3 ಕೀರ್ತನೆಗಳು 28:3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- Isaiah 59:4 ಯೆಶಾಯ 59:4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- 1 Samuel 23:9 1 ಸಮುವೇಲನು 23:9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- Job 15:35 ಯೋಬನು 15:35ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Acts 13:10 ಅಪೊಸ್ತಲರ ಕೃತ್ಯಗಳು 13:10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- Esther 3:6–7 ಎಸ್ತೇರಳು 3:6–7ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು. ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.