Proverbs · chapter 24 · verse 21
Proverbs 24:21 in Kannada
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
Nanna magane, kartanigoo arasanigoo bhayapadu; bhayapadadavara godavege hoga beda.
Proverbs 24:21 in English
- King James Version (KJV)
- My son, fear thou the LORD and the king: [and] meddle not with them that are given to change:
- World English Bible (WEB)
- My son, fear the LORD and the king. Don’t join those who are rebellious,
- American Standard Version (ASV)
- My son, fear thou Jehovah and the king; [And] company not with them that are given to change:
- Bible in Basic English (BBE)
- My son, go in fear of the Lord and the king: have nothing to do with those who are in high positions:
- Darby Translation (DBY)
- My son, fear Jehovah and the king: meddle not with them that are given to change.
- Webster's Bible (WBS)
- My son, fear thou the LORD and the king: [and] meddle not with them that are given to change:
- Young's Literal Translation (YLT)
- Fear Jehovah, my son, and the king, With changers mix not up thyself,
Read in context
- 19ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
- 20ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
- 21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 22ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
- 23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
Cross references
- Romans 13:1–7 ರೋಮಾಪುರದವರಿಗೆ 13:1–7ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- 1 Peter 2:13–17 1 ಪೇತ್ರನು 2:13–17ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ. ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ. ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- Matthew 22:21 ಮತ್ತಾಯನು 22:21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- Exodus 14:31 ವಿಮೋಚನಕಾಂಡ 14:31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Ecclesiastes 8:2–5 ಪ್ರಸಂಗಿ 8:2–5ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ. ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ. ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು? ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- 1 Samuel 12:12–19 1 ಸಮುವೇಲನು 12:12–19ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ. ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ. ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ. ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು. ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ. ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು. ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು. ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
- 1 Samuel 8:5–7 1 ಸಮುವೇಲನು 8:5–7ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು. ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
- 2 Samuel 15:13–37 2 ಸಮುವೇಲನು 15:13–37ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು. ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು. ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು. ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು. ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು. ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು. ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು. ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು. ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು. ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು. ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು. ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು. ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ. ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು. ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು. ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು. ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು. ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು. ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು. ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು. ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು. ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು. ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
- Numbers 16:1–3 ಅರಣ್ಯಕಾಂಡ 16:1–3ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- 1 Samuel 24:6 1 ಸಮುವೇಲನು 24:6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.