Proverbs · chapter 24 · verse 26
Proverbs 24:26 in Kannada
ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
Sariyaagi uttarisuvavana tutigalannu prati yobbanu muddiduvanu.
Proverbs 24:26 in English
- King James Version (KJV)
- [Every man] shall kiss [his] lips that giveth a right answer.
- World English Bible (WEB)
- An honest answer is like a kiss on the lips.
- American Standard Version (ASV)
- He kisseth the lips Who giveth a right answer.
- Bible in Basic English (BBE)
- He gives a kiss with his lips who gives a right answer.
- Darby Translation (DBY)
- He kisseth the lips who giveth a right answer.
- Webster's Bible (WBS)
- [Every man] shall kiss [his] lips that giveth a right answer.
- Young's Literal Translation (YLT)
- Lips he kisseth who is returning straightforward words.
Read in context
- 24ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
- 25ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
- 26ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
- 27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
- 28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
Cross references
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Genesis 41:38–57 ಆದಿಕಾಂಡ 41:38–57ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು. ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು. ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು. ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು. ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು. ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು. ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು. ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು. ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು. ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು. ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು. ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು. ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು. ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Proverbs 25:11–12 ಜ್ಞಾನೋಕ್ತಿಗಳು 25:11–12ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 16:1 ಜ್ಞಾನೋಕ್ತಿಗಳು 16:1ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
- Job 6:25 ಯೋಬನು 6:25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
- Mark 12:32–34 ಮಾರ್ಕನು 12:32–34ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Daniel 2:46–48 ದಾನಿಯೇಲನು 2:46–48ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು. ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು. ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Mark 12:17–18 ಮಾರ್ಕನು 12:17–18ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು. ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--