Proverbs · chapter 24 · verse 4
Proverbs 24:4 in Kannada
ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
Tiluvalikeyinda ellaa amoolyavaada mattu ishta sampattininda konegalu tumbalpaduvavu.
Proverbs 24:4 in English
- King James Version (KJV)
- And by knowledge shall the chambers be filled with all precious and pleasant riches.
- World English Bible (WEB)
- by knowledge the rooms are filled with all rare and beautiful treasure.
- American Standard Version (ASV)
- And by knowledge are the chambers filled With all precious and pleasant riches.
- Bible in Basic English (BBE)
- And by knowledge its rooms are full of all dear and pleasing things.
- Darby Translation (DBY)
- and by knowledge are the chambers filled with all precious and pleasant substance.
- Webster's Bible (WBS)
- And by knowledge shall the chambers be filled with all precious and pleasant riches.
- Young's Literal Translation (YLT)
- And by knowledge the inner parts are filled, [With] all precious and pleasant wealth.
Read in context
- 2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- 3ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
- 4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
- 5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
Cross references
- Proverbs 15:6 ಜ್ಞಾನೋಕ್ತಿಗಳು 15:6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
- Proverbs 21:20 ಜ್ಞಾನೋಕ್ತಿಗಳು 21:20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- Proverbs 20:15 ಜ್ಞಾನೋಕ್ತಿಗಳು 20:15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- Proverbs 8:21 ಜ್ಞಾನೋಕ್ತಿಗಳು 8:21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- Nehemiah 13:5–13 ನೆಹೆಮೀಯ 13:5–13ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು. ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು. ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು. ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು. ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು. ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು. ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
- 1 Chronicles 29:2–9 1 ಪೂರ್ವಕಾಲವೃತ್ತಾಂತ 29:2–9ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 2 Chronicles 26:4–11 2 ಪೂರ್ವಕಾಲವೃತ್ತಾಂತ 26:4–11ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು. ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು. ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು. ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು. ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು. ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು. ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
- 1 Kings 4:22–28 1 ಅರಸುಗಳು 4:22–28ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು. ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು. ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು. ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ. ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
- 1 Chronicles 27:25–31 1 ಪೂರ್ವಕಾಲವೃತ್ತಾಂತ 27:25–31ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು. ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
- Nehemiah 10:39 ನೆಹೆಮೀಯ 10:39ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- Proverbs 27:23–27 ಜ್ಞಾನೋಕ್ತಿಗಳು 27:23–27ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ? ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ. ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ. ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.