Proverbs · chapter 25 · verse 26
Proverbs 25:26 in Kannada
ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
Dushtara munde neetivantanu beeluvadu, kadali salpatta bugge, kolakaada orate iddante.
Proverbs 25:26 in English
- King James Version (KJV)
- A righteous man falling down before the wicked [is as] a troubled fountain, and a corrupt spring.
- World English Bible (WEB)
- Like a muddied spring and a polluted well, so is a righteous man who gives way before the wicked.
- American Standard Version (ASV)
- [As] a troubled fountain, and a corrupted spring, [So is] a righteous man that giveth way before the wicked.
- Bible in Basic English (BBE)
- Like a troubled fountain and a dirty spring, is an upright man who has to give way before evil-doers.
- Darby Translation (DBY)
- A troubled fountain, and a defiled well, is a righteous [man] that giveth way before the wicked.
- Webster's Bible (WBS)
- A righteous man falling down before the wicked [is as] a turbid fountain, and a corrupt spring.
- Young's Literal Translation (YLT)
- A spring troubled, and a fountain corrupt, [Is] the righteous falling before the wicked.
Read in context
- 24ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
- 25ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
- 26ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
- 27ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- 28ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
Cross references
- Ezekiel 34:18–19 ಯೆಹೆಜ್ಕೇಲನು 34:18–19ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ? ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
- 2 Chronicles 24:21–22 2 ಪೂರ್ವಕಾಲವೃತ್ತಾಂತ 24:21–22ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- 1 Samuel 22:14–18 1 ಸಮುವೇಲನು 22:14–18ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
- Genesis 4:8 ಆದಿಕಾಂಡ 4:8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- Matthew 26:69–74 ಮತ್ತಾಯನು 26:69–74ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು. ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Ezekiel 32:2 ಯೆಹೆಜ್ಕೇಲನು 32:2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
- Matthew 23:34–37 ಮತ್ತಾಯನು 23:34–37ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ