Proverbs · chapter 25 · verse 6
Proverbs 25:6 in Kannada
ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
Arasana sannidhiyalli ninnannu hechchisikollabeda; doddavara sthaanadalli nillabeda;
Proverbs 25:6 in English
- King James Version (KJV)
- Put not forth thyself in the presence of the king, and stand not in the place of great [men:]
- World English Bible (WEB)
- Don’t exalt yourself in the presence of the king, or claim a place among great men;
- American Standard Version (ASV)
- Put not thyself forward in the presence of the king, And stand not in the place of great men:
- Bible in Basic English (BBE)
- Do not take glory for yourself before the king, and do not put yourself in the place of the great:
- Darby Translation (DBY)
- Put not thyself forward in the presence of the king, and stand not in the place of the great;
- Webster's Bible (WBS)
- Put not forth thyself in the presence of the king, and stand not in the place of great [men] :
- Young's Literal Translation (YLT)
- Honour not thyself before a king, And in the place of the great stand not.
Read in context
- 4ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
- 5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- 6ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
- 7ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
- 8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
Cross references
- Proverbs 27:2 ಜ್ಞಾನೋಕ್ತಿಗಳು 27:2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- Proverbs 16:19 ಜ್ಞಾನೋಕ್ತಿಗಳು 16:19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
- Proverbs 25:27 ಜ್ಞಾನೋಕ್ತಿಗಳು 25:27ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- Exodus 3:11 ವಿಮೋಚನಕಾಂಡ 3:11ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.
- 2 Samuel 7:8–17 2 ಸಮುವೇಲನು 7:8–17ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು; ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು. ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು. ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
- Psalm 131:1 ಕೀರ್ತನೆಗಳು 131:1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
- Jeremiah 1:6–10 ಯೆರೆಮೀಯ 1:6–10ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು. ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 1 Samuel 15:17 1 ಸಮುವೇಲನು 15:17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- 1 Samuel 9:20–22 1 ಸಮುವೇಲನು 9:20–22ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು. ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು. ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.
- Amos 7:12–15 ಆಮೋಸ 7:12–15ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ. ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
- 1 Samuel 18:18–23 1 ಸಮುವೇಲನು 18:18–23ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು. ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು. ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು. ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು. ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು. ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.