Proverbs · chapter 25 · verse 8
Proverbs 25:8 in Kannada
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
Ninna nereyavanu ninnannu avamaanakke gurimaadidaaga kadeyalli enu maadabekembadu neenu tiliya dante dudukininda kalahamaaduvadakkaagi hoga beda.
Proverbs 25:8 in English
- King James Version (KJV)
- Go not forth hastily to strive, lest [thou know not] what to do in the end thereof, when thy neighbour hath put thee to shame.
- World English Bible (WEB)
- Don’t be hasty in bringing charges to court. What will you do in the end when your neighbor shames you?
- American Standard Version (ASV)
- Go not forth hastily to strive, Lest [thou know not] what to do in the end thereof, When thy neighbor hath put thee to shame.
- Bible in Basic English (BBE)
- Do not be quick to go to law about what you have seen, for what will you do in the end, when your neighbour has put you to shame?
- Darby Translation (DBY)
- Go not forth hastily to strive, lest [thou know not] what to do in the end thereof, when thy neighbour hath put thee to shame.
- Webster's Bible (WBS)
- Go not forth hastily to strive, lest [thou know not] what to do in the end thereof, when thy neighbor hath put thee to shame.
- Young's Literal Translation (YLT)
- Go not forth to strive, haste, turn, What dost thou in its latter end, When thy neighbour causeth thee to blush?
Read in context
- 6ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
- 7ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
- 8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- 9ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
- 10ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
Cross references
- Matthew 5:25 ಮತ್ತಾಯನು 5:25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Proverbs 30:33 ಜ್ಞಾನೋಕ್ತಿಗಳು 30:33ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Luke 14:31–32 ಲೂಕನು 14:31–32ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- 2 Samuel 2:26 2 ಸಮುವೇಲನು 2:26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
- 2 Samuel 2:14–16 2 ಸಮುವೇಲನು 2:14–16ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು. ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು. ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು.
- 2 Kings 14:8–12 2 ಅರಸುಗಳು 14:8–12ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು. ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು. ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.