Proverbs · chapter 25 · verse 9
Proverbs 25:9 in Kannada
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
Ninna nereyavanondige ninna vyaajyavannu charchisu; guttannu berobbanige horapadisabeda;
Proverbs 25:9 in English
- King James Version (KJV)
- Debate thy cause with thy neighbour [himself;] and discover not a secret to another:
- World English Bible (WEB)
- Debate your case with your neighbor, and don’t betray the confidence of another,
- American Standard Version (ASV)
- Debate thy cause with thy neighbor [himself], And disclose not the secret of another;
- Bible in Basic English (BBE)
- Have a talk with your neighbour himself about your cause, but do not give away the secret of another:
- Darby Translation (DBY)
- Debate thy cause with thy neighbour, but reveal not the secret of another;
- Webster's Bible (WBS)
- Debate thy cause with thy neighbor [himself] ; and reveal not a secret to another:
- Young's Literal Translation (YLT)
- Thy cause plead with thy neighbour, And the secret counsel of another reveal not,
Read in context
- 7ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
- 8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- 9ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
- 10ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
- 11ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
Cross references
- Matthew 18:5–17 ಮತ್ತಾಯನು 18:5–17ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ. ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು. ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ! ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ. ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು. ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ? ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ. ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು. ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Proverbs 11:13 ಜ್ಞಾನೋಕ್ತಿಗಳು 11:13ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.