Proverbs · chapter 26 · verse 1
Proverbs 26:1 in Kannada
ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
Besigeyalli himadanteyoo suggiyalli maleyanteyoo buddhiheenanige maana vu sariyalla.
Proverbs 26:1 in English
- King James Version (KJV)
- As snow in summer, and as rain in harvest, so honour is not seemly for a fool.
- World English Bible (WEB)
- Like snow in summer, and as rain in harvest, so honor is not fitting for a fool.
- American Standard Version (ASV)
- As snow in summer, and as rain in harvest, So honor is not seemly for a fool.
- Bible in Basic English (BBE)
- Like snow in summer and rain when the grain is being cut, so honour is not natural for the foolish.
- Darby Translation (DBY)
- As snow in summer, and as rain in harvest, so honour beseemeth not a fool.
- Webster's Bible (WBS)
- As snow in summer, and as rain in harvest; so honor is not seemly for a fool.
- Young's Literal Translation (YLT)
- As snow in summer, and as rain in harvest, So honour [is] not comely for a fool.
Read in context
- 1ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
- 2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
- 3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
Cross references
- Proverbs 19:10 ಜ್ಞಾನೋಕ್ತಿಗಳು 19:10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
- Proverbs 28:16 ಜ್ಞಾನೋಕ್ತಿಗಳು 28:16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
- 1 Samuel 12:17–18 1 ಸಮುವೇಲನು 12:17–18ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು. ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Psalm 12:8 ಕೀರ್ತನೆಗಳು 12:8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
- Esther 3:1–15 ಎಸ್ತೇರಳು 3:1–15ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು. ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು. ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು. ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು. ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು. ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು. ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು. ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು. ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು. ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು. ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು. ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Esther 4:6 ಎಸ್ತೇರಳು 4:6ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.
- Proverbs 26:8 ಜ್ಞಾನೋಕ್ತಿಗಳು 26:8ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
- Esther 4:9 ಎಸ್ತೇರಳು 4:9ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು.
- Ecclesiastes 10:5–7 ಪ್ರಸಂಗಿ 10:5–7ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು. ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
- Psalm 52:1 ಕೀರ್ತನೆಗಳು 52:1ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
- Proverbs 17:7 ಜ್ಞಾನೋಕ್ತಿಗಳು 17:7ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.