Proverbs · chapter 26 · verse 28
Proverbs 26:28 in Kannada
ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
Sullu naaligeyinda baadhisalpa ttavaranne adu hagemaaduvadu; mukhastuti maaduva baayiyu naashanavannuntumaaduttade.
Proverbs 26:28 in English
- King James Version (KJV)
- A lying tongue hateth [those that are] afflicted by it; and a flattering mouth worketh ruin.
- World English Bible (WEB)
- A lying tongue hates those it hurts; and a flattering mouth works ruin.
- American Standard Version (ASV)
- A lying tongue hateth those whom it hath wounded; And a flattering mouth worketh ruin.
- Bible in Basic English (BBE)
- A false tongue has hate for those who have clean hearts, and a smooth mouth is a cause of falling.
- Darby Translation (DBY)
- A lying tongue hateth those that are injured by it, and a flattering mouth worketh ruin.
- Webster's Bible (WBS)
- A lying tongue hateth [those that are] afflicted by it; and a flattering mouth worketh ruin.
- Young's Literal Translation (YLT)
- A lying tongue hateth its bruised ones, And a flattering mouth worketh an overthrow!
Read in context
- 26ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- 27ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- 28ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
Cross references
- John 8:44–49 ಯೋಹಾನನು 8:44–49ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ. ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ? ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು. ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
- Luke 20:20–21 ಲೂಕನು 20:20–21ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು. ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- Proverbs 7:5 ಜ್ಞಾನೋಕ್ತಿಗಳು 7:5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- Proverbs 7:21–23 ಜ್ಞಾನೋಕ್ತಿಗಳು 7:21–23ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Proverbs 6:24 ಜ್ಞಾನೋಕ್ತಿಗಳು 6:24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- John 10:32–33 ಯೋಹಾನನು 10:32–33ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- John 15:22–24 ಯೋಹಾನನು 15:22–24ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- John 8:40 ಯೋಹಾನನು 8:40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.