Proverbs · chapter 27 · verse 10
Proverbs 27:10 in Kannada
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
Ninna snehitanannoo ninna tandeya snehitanannoo tyajisabeda; allade ninna ikkattina dinadalli ninna sahodarana manege hogabeda; dooravaagiruva sahodaraniginta hattiravaagiruva nereyavane lesu.
Proverbs 27:10 in English
- King James Version (KJV)
- Thine own friend, and thy father’s friend, forsake not; neither go into thy brother’s house in the day of thy calamity: [for] better [is] a neighbour [that is] near than a brother far off.
- World English Bible (WEB)
- Don’t forsake your friend and your father’s friend. Don’t go to your brother’s house in the day of your disaster. A neighbor who is near is better than a distant brother.
- American Standard Version (ASV)
- Thine own friend, and thy father’s friend, forsake not; And go not to thy brother’s house in the day of thy calamity: Better is a neighbor that is near than a brother far off.
- Bible in Basic English (BBE)
- Do not give up your friend and your father's friend; and do not go into your brother's house in the day of your trouble: better is a neighbour who is near than a brother far off.
- Darby Translation (DBY)
- Thine own friend, and thy father's friend, forsake not; and go not into thy brother's house in the day of thy calamity: better is a neighbour that is near than a brother far off.
- Webster's Bible (WBS)
- Thy own friend, and thy father's friend, forsake not; neither go into thy brother's house in the day of thy calamity: [for] better [is] a neighbor [that is] near, than a brother far off.
- Young's Literal Translation (YLT)
- Thine own friend, and the friend of thy father, forsake not, And the house of thy brother enter not In a day of thy calamity, Better [is] a near neighbour than a brother afar off.
Read in context
- 8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
- 9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- 10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
- 11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- 12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
Cross references
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- 1 Kings 12:6–8 1 ಅರಸುಗಳು 12:6–8ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
- Luke 10:30–37 ಲೂಕನು 10:30–37ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು. ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
- Obadiah 1:12–14 ಓಬದ್ಯ 1:12–14ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- Proverbs 19:7 ಜ್ಞಾನೋಕ್ತಿಗಳು 19:7ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
- Job 6:21–23 ಯೋಬನು 6:21–23ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ. ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- 2 Samuel 19:24 2 ಸಮುವೇಲನು 19:24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- 2 Chronicles 10:6–8 2 ಪೂರ್ವಕಾಲವೃತ್ತಾಂತ 10:6–8ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು. ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
- 2 Samuel 21:7 2 ಸಮುವೇಲನು 21:7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
- Jeremiah 2:5 ಯೆರೆಮೀಯ 2:5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
- Isaiah 41:8–10 ಯೆಶಾಯ 41:8–10ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ; ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ. ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
Original words (Hebrew)
- friend · H7453רֵעַ rêaʻ
- father’s · H1אָב ʼâb
- friend · H7453רֵעַ rêaʻ
- forsake · H5800עָזַב ʻâzab
- go · H935בּוֹא bôwʼ
- brother’s · H251אָח ʼâch
- house · H1004בַּיִת bayith
- day · H3117יוֹם yôwm
- calamity · H343אֵיד ʼêyd
- better · H2896טוֹב ṭôwb
- neighbour · H7934שָׁכֵן shâkên
- near · H7138קָרוֹב qârôwb
- brother · H251אָח ʼâch
- off · H7350רָחוֹק râchôwq