Proverbs · chapter 27 · verse 12
Proverbs 27:12 in Kannada
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
Jaananu kedannu mundaagi nodi adagikolluttaane; buddhiheenanu munde hogi shikshisalpaduttaane.
Proverbs 27:12 in English
- King James Version (KJV)
- A prudent [man] foreseeth the evil, [and] hideth himself; [but] the simple pass on, [and] are punished.
- World English Bible (WEB)
- A prudent man sees danger and takes refuge; but the simple pass on, and suffer for it.
- American Standard Version (ASV)
- A prudent man seeth the evil, [and] hideth himself; [But] the simple pass on, [and] suffer for it.
- Bible in Basic English (BBE)
- The sharp man sees the evil and takes cover: the simple go straight on and get into trouble.
- Darby Translation (DBY)
- A prudent [man] seeth the evil, [and] hideth himself; the simple pass on, [and] are punished.
- Webster's Bible (WBS)
- A prudent [man] foreseeth the evil, [and] hideth himself; [but] the simple pass on, [and] are punished.
- Young's Literal Translation (YLT)
- The prudent hath seen the evil, he is hidden, The simple have passed on, they are punished.
Read in context
- 10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
- 11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- 12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
- 13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
- 14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
Cross references
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 2 Peter 3:10–14 2 ಪೇತ್ರನು 3:10–14ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Exodus 9:20–21 ವಿಮೋಚನಕಾಂಡ 9:20–21ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Psalm 57:1–3 ಕೀರ್ತನೆಗಳು 57:1–3ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ. ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ. ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Isaiah 26:20–21 ಯೆಶಾಯ 26:20–21ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು. ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?