Proverbs · chapter 27 · verse 4
Proverbs 27:4 in Kannada
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
Krodhavu kroora. Kopavu ghora; matsarada munde yaavanu nintaanu?
Proverbs 27:4 in English
- King James Version (KJV)
- Wrath [is] cruel, and anger [is] outrageous; but who [is] able to stand before envy?
- World English Bible (WEB)
- Wrath is cruel, and anger is overwhelming; but who is able to stand before jealousy?
- American Standard Version (ASV)
- Wrath is cruel, and anger is overwhelming; But who is able to stand before jealousy?
- Bible in Basic English (BBE)
- Wrath is cruel, and angry feeling an overflowing stream; but who does not give way before envy?
- Darby Translation (DBY)
- Fury is cruel, and anger is outrageous; but who is able to stand before jealousy?
- Webster's Bible (WBS)
- Wrath [is] cruel, and anger [is] outrageous; but who [is] able to stand before envy?
- Young's Literal Translation (YLT)
- Fury [is] fierce, and anger [is] overflowing, And who standeth before jealousy?
Read in context
- 2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- 3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- 4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- 5ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
- 6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
Cross references
- Proverbs 6:34 ಜ್ಞಾನೋಕ್ತಿಗಳು 6:34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Proverbs 14:30 ಜ್ಞಾನೋಕ್ತಿಗಳು 14:30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Acts 7:9 ಅಪೊಸ್ತಲರ ಕೃತ್ಯಗಳು 7:9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Matthew 27:18 ಮತ್ತಾಯನು 27:18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- Genesis 26:14 ಆದಿಕಾಂಡ 26:14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Genesis 37:11 ಆದಿಕಾಂಡ 37:11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- James 1:19–21 ಯಾಕೋಬನು 1:19–21ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ. ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.