Proverbs · chapter 27 · verse 6
Proverbs 27:6 in Kannada
ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
Snehitanu maaduva gaayagalu nambikeyullavugalaagive; shatruvina muddugalu mosakaravaagive.
Proverbs 27:6 in English
- King James Version (KJV)
- Faithful [are] the wounds of a friend; but the kisses of an enemy [are] deceitful.
- World English Bible (WEB)
- The wounds of a friend are faithful, although the kisses of an enemy are profuse.
- American Standard Version (ASV)
- Faithful are the wounds of a friend; But the kisses of an enemy are profuse.
- Bible in Basic English (BBE)
- The wounds of a friend are given in good faith, but the kisses of a hater are false.
- Darby Translation (DBY)
- Faithful are the wounds of a friend; but the kisses of an enemy are profuse.
- Webster's Bible (WBS)
- Faithful [are] the wounds of a friend; but the kisses of an enemy [are] deceitful.
- Young's Literal Translation (YLT)
- Faithful are the wounds of a lover, And abundant the kisses of an enemy.
Read in context
- 4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- 5ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
- 6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- 7ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
- 8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
Cross references
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Job 5:17–18 ಯೋಬನು 5:17–18ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- Proverbs 26:23–26 ಜ್ಞಾನೋಕ್ತಿಗಳು 26:23–26ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ. ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- 2 Samuel 12:7–15 2 ಸಮುವೇಲನು 12:7–15ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು. ಆಗ ನಾತಾನನು ತನ್ನ ಮನೆಗೆ ಹೋದನು.
- Hebrews 12:10 ಇಬ್ರಿಯರಿಗೆ 12:10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- Matthew 26:48–50 ಮತ್ತಾಯನು 26:48–50ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.