Proverbs · chapter 27 · verse 8
Proverbs 27:8 in Kannada
ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
Tanna sthalavannu bittu aleyuva manushyanu tanna goodannu bittu aleyuva pakshi yante iddaane.
Proverbs 27:8 in English
- King James Version (KJV)
- As a bird that wandereth from her nest, so [is] a man that wandereth from his place.
- World English Bible (WEB)
- As a bird that wanders from her nest, so is a man who wanders from his home.
- American Standard Version (ASV)
- As a bird that wandereth from her nest, So is a man that wandereth from his place.
- Bible in Basic English (BBE)
- Like a bird wandering from the place of her eggs is a man wandering from his station.
- Darby Translation (DBY)
- As a bird that wandereth from her nest, so is a man that wandereth from his place.
- Webster's Bible (WBS)
- As a bird that wandereth from her nest, so [is] a man that wandereth from his place.
- Young's Literal Translation (YLT)
- As a bird wandering from her nest, So [is] a man wandering from his place.
Read in context
- 6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- 7ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
- 8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
- 9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- 10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
Cross references
- Proverbs 21:16 ಜ್ಞಾನೋಕ್ತಿಗಳು 21:16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- Jonah 1:10–17 ಯೋನ 1:10–17ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು. ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು. ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು. ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು. ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು. ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು. ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು. ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- 1 Corinthians 7:20 1 ಕೊರಿಂಥದವರಿಗೆ 7:20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
- Genesis 16:6–8 ಆದಿಕಾಂಡ 16:6–8ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು. ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- 1 Kings 19:9 1 ಅರಸುಗಳು 19:9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
- 1 Samuel 22:5 1 ಸಮುವೇಲನು 22:5ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
- Proverbs 26:2 ಜ್ಞಾನೋಕ್ತಿಗಳು 26:2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
- Job 39:14–16 ಯೋಬನು 39:14–16ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ. ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ. ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
- Nehemiah 6:11–13 ನೆಹೆಮೀಯ 6:11–13ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು. ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು. ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.
- Genesis 4:16 ಆದಿಕಾಂಡ 4:16ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.