Proverbs · chapter 28 · verse 15
Proverbs 28:15 in Kannada
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
Garjisuva sinhadanteyoo aledaaduva karadiyanteyoo badavaraada janarannu aaluva dushtanu iruttaane.
Proverbs 28:15 in English
- King James Version (KJV)
- [As] a roaring lion, and a ranging bear; [so is] a wicked ruler over the poor people.
- World English Bible (WEB)
- As a roaring lion or a charging bear, so is a wicked ruler over helpless people.
- American Standard Version (ASV)
- [As] a roaring lion, and a ranging bear, [So is] a wicked ruler over a poor people.
- Bible in Basic English (BBE)
- Like a loud-voiced lion and a wandering bear, is an evil ruler over a poor people.
- Darby Translation (DBY)
- A roaring lion, and a ranging bear, is a wicked ruler over a poor people.
- Webster's Bible (WBS)
- [As] a roaring lion, and a ranging bear; [so is] a wicked ruler over the poor people.
- Young's Literal Translation (YLT)
- A growling lion, and a ranging bear, [Is] the wicked ruler over a poor people.
Read in context
- 13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- 14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- 15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
- 16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
- 17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Exodus 1:22 ವಿಮೋಚನಕಾಂಡ 1:22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- Proverbs 20:2 ಜ್ಞಾನೋಕ್ತಿಗಳು 20:2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 1 Samuel 22:17–19 1 ಸಮುವೇಲನು 22:17–19ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Exodus 1:14–16 ವಿಮೋಚನಕಾಂಡ 1:14–16ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು. ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು. ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
- 2 Kings 2:24 2 ಅರಸುಗಳು 2:24ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
- 2 Kings 15:16 2 ಅರಸುಗಳು 15:16ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- Hosea 13:8 ಹೋಶೇಯ 13:8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.